ಬೆಂಗಳೂರು,ಮೇ. 07 (DaijiworldNews/AK):18ನೇ ಆವೃತ್ತಿಯ ಐಪಿಎಲ್ನಲ್ಲಿ ಪ್ರಶಸ್ತಿ ಗೆಲ್ಲುವ ರೇಸ್ನಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ಸ್ಟಾರ್ ಆಟಗಾರ ಕನ್ನಡಿಗ ದೇವದತ್ ಪಡಿಕ್ಕಲ್ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಐಪಿಎಲ್ನಿಂದ ಹೊರಬಿದ್ದಿದ್ದಾರೆ.

ಪಡಿಕ್ಕಲ್ ಅವರು ಸ್ನಾಯು ಸೆಳೆತಕ್ಕೆ ತುತ್ತಾಗಿದ್ದು, ಆರ್ಸಿಬಿಯ ಇನ್ನುಳಿದ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಇದೀಗ ಪಡಿಕ್ಕಲ್ ಸ್ಥಾನವನ್ನು ತುಂಬಲು ಕನ್ನಡಿಗ ಮಯಾಂಕ್ ಅಗರ್ವಾಲ್ನನ್ನು ತಂಡಕ್ಕೆ ಸೇರ್ಪಡೆ ಮಾಡಲಾಗಿದೆ ಎಂದು ಫ್ರಾಂಚೈಸಿ ತಿಳಿಸಿದೆ.
ಸದ್ಯ ಲೀಗ್ ಸುತ್ತಿನಲ್ಲಿ ಆರ್ಸಿಬಿಗೆ ಮೂರು ಪಂದ್ಯಗಳು ಬಾಕಿ ಉಳಿದಿವೆ. ಮೇ 9ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಏಕನಾ ಕ್ರೀಡಾಂಗಣದಲ್ಲಿ ಕಾದಾಟಕ್ಕಿಳಿಯಲಿದೆ. ಮೇ 13ರಂದು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಹಾಗೂ ಮೇ 17ರಂದು ಕೆಕೆಆರ್ ವಿರುದ್ಧ ತವರು ಕ್ರೀಡಾಂಗಣದಲ್ಲಿ ಆಡಲಿದೆ.