ಹೈದರಾಬಾದ್, ಮೇ. 18 (DaijiworldNews/AA): ಸನ್ರೈಸರ್ಸ್ ಹೈದರಾಬಾದ್ನ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ಗೆ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಮುಂದಿನ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.

ಭಾರತ-ಪಾಕಿಸ್ತಾನ ಉದ್ವಿಗ್ನತೆಯಿಂದಾಗಿ ಐಪಿಎಲ್ 2025 ಅನ್ನು ಅರ್ಧಕ್ಕೆ ನಿಲ್ಲಿಸಲಾಗಿತ್ತು. ಹೀಗಾಗಿ ಎಲ್ಲಾ ವಿದೇಶಿ ಆಟಗಾರರು ತಮ್ಮ ಮನೆಗಳಿಗೆ ಮರಳಿದ್ದರು. ಅದರಂತೆ ಹೈದರಾಬಾದ್ನ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ತನ್ನ ದೇಶ ಆಸ್ಟ್ರೇಲಿಯಾಕ್ಕೆ ಮರಳಿದ್ದರು. ಆದರೆ ಅವರು ಕೊರೊನಾ ಪಾಸಿಟಿವ್ನಿಂದಾಗಿ ಭಾರತಕ್ಕೆ ಮರಳು ಸಾಧ್ಯವಾಗಲಿಲ್ಲ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸನ್ರೈಸರ್ಸ್ ಕೋಚ್ ವೆಟ್ಟೋರಿ, 'ಹೆಡ್ ಆಸ್ಟ್ರೇಲಿಯಾದಲ್ಲಿದ್ದಾಗ ಕೊರೊನಾವೈರಸ್ ಸೋಂಕಿಗೆ ತುತ್ತಾಗಿದ್ದಾರೆ. ಇದರಿಂದಾಗಿ ಅವರು ತಕ್ಷಣ ಭಾರತಕ್ಕೆ ಮರಳಲು ಸಾಧ್ಯವಾಗಲಿಲ್ಲ. ಇದೀಗ ಅವರು ಸೋಮವಾರ ಬೆಳಿಗ್ಗೆ ಇಲ್ಲಿಗೆ ತಲುಪುತ್ತಾರೆ. ಈ ಕಾರಣದಿಂದಾಗಿ ಅವರು ಲಕ್ನೋ ವಿರುದ್ಧ ಆಡಲು ಸಾಧ್ಯವಾಗುವುದಿಲ್ಲ, ಆದರೆ ಮುಂದಿನ ಪಂದ್ಯದಲ್ಲಿ ಆಡುತ್ತಾರೋ ಇಲ್ಲವೋ ಎಂಬುದು ಅವರು ಬಂದ ನಂತರವೇ ನಿರ್ಧರಿಸಲಾಗುವುದು ಎಂದು ವೆಟ್ಟೋರಿ ಹೇಳಿದ್ದಾರೆ.