ಮುಂಬೈ,ಜೂ. 26 (DaijiworldNews/AK): ಭಾರತ ಕ್ರಿಕೆಟ್ ತಂಡದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ವಿರಾಮದಲ್ಲಿದ್ದಾರೆ. ಸೂರ್ಯ ಇತ್ತೀಚೆಗೆ ಇಂಡಿಯನ್ ಪ್ರೀಮಿಯರ್ ಲೀಗ್ 2025 ರಲ್ಲಿ ಅದ್ಭುತ ಪ್ರದರ್ಶನ ನೀಡಿದರು.

ಈಗ ಅವರು ಜರ್ಮನಿಯಲ್ಲಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅಭಿಮಾನಿಗಳಿಗಾಗಿ ದೊಡ್ಡ ಅಪ್ಡೇಟ್ ನೀಡಿದ್ದಾರೆ. ಇತ್ತೀಚೆಗಷ್ಟೆ ಸೂರ್ಯಕುಮಾರ್ ಯಾದವ್ ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಕ್ರೀಡಾ ಹರ್ನಿಯಾಗೆ ಯಶಸ್ವಿ ಶಸ್ತ್ರಚಿಕಿತ್ಸೆ ಆಗಿದೆ ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.
ಶಸ್ತ್ರಚಿಕಿತ್ಸೆಯಿಂದಾಗಿ ಅವರು ಮುಂಬವರು ಬಾಂಗ್ಲಾದೇಶ ಪ್ರವಾಸಕ್ಕೆ ಹೋಗುವ ಸಾಧ್ಯತೆ ಕಡಿಮೆ. ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಅವರಿಗೆ 6 ರಿಂದ 12 ವಾರಗಳು ಬೇಕಾಗುತ್ತದೆ. ಮುಂದಿನ ವರ್ಷ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ 2026 ರಲ್ಲಿ ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದು, ಇವರು ಮಹತ್ವದ ಪಾತ್ರ ವಹಿಸಲಿದ್ದಾರೆ. ರೋಹಿತ್ ಶರ್ಮಾ ನಂತರ, ಬಿಸಿಸಿಐ ಇವರಿಗೆ ಟಿ20 ತಂಡದ ನಾಯಕತ್ವ ನೀಡಿದೆ.