ಜಾರ್ಜಿಯಾ,ಜು. 28 (DaijiworldNews/AK): 19 ವರ್ಷದ ದಿವ್ಯಾ ದೇಶಮುಖ್ ಫಿಡೆ ಮಹಿಳಾ ಚೆಸ್ ವಿಶ್ವಕಪ್ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.

ಜಾರ್ಜಿಯಾದಲ್ಲಿ ನಡೆದ ವಿಶ್ವಕಪ್ ಫೈನಲ್ನಲ್ಲಿ ಭಾರತದ ನಂ.1 ಮತ್ತು ಲೆಜೆಂಡರಿ ಆಟಗಾರ್ತಿ ಕೊನೆರು ಹಂಪಿ ಅವರನ್ನು ಸೋಲಿಸುವ ಮೂಲಕ ದಿವ್ಯಾ ದೇಶಮುಖ್ ಈ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ಭಾರತದ ಅನುಭವಿ ಚೆಸ್ ಆಟಗಾರ್ತಿ ಕೊನೆರು ಹಂಪಿ ವಿರುದ್ಧ ನಡೆದ ಟೈ ಬ್ರೇಕರ್ ಪಂದ್ಯದಲ್ಲಿ ದಿವ್ಯಾ ದೇಶಮುಖ್ ಅವರು ಗೆಲುವು ಸಾಧಿಸಿ ಮೊಟ್ಟ ಮೊದಲ ಬಾರಿಗೆ ವಿಶ್ವಕಪ್ ಜಯಿಸಿದರು. ಈ ಮೂಲಕ ಚೆಸ್ ವಿಶ್ವಕಪ್ ಗೆದ್ದ ಮೊದಲ ಭಾರತೀಯ ಮಹಿಳೆ ಎನಿಸಿಕೊಂಡಿದ್ದಾರೆ.
ಮಹಾರಾಷ್ಟ್ರದ ನಾಗ್ಪುರದ ದಿವ್ಯಾ ದೇಶಮುಖ್ ಮರಾಠಿ ಕುಟುಂಬದಲ್ಲಿ ಜನಿಸಿದ್ದಾರೆ. ಇವರ ಪೋಷಕರು ವೈದ್ಯರಾಗಿದ್ದಾರೆ. 2022 ರ ಮಹಿಳಾ ಭಾರತೀಯ ಚೆಸ್ ಚಾಂಪಿಯನ್ಶಿಪ್ ಗೆದ್ದ ಇವರು 2021 ರಲ್ಲಿ ಭಾರತದ 21 ನೇ ಮಹಿಳಾ ಗ್ರ್ಯಾಂಡ್ಮಾಸ್ಟರ್ ಕಿರೀಟವನ್ನು ಪಡೆದಿದ್ದರು. 2020 ರ FIDE ಆನ್ಲೈನ್ ಒಲಿಂಪಿಯಾಡ್ನಲ್ಲಿ ಭಾರತ ಚಿನ್ನ ಗೆದ್ದಿತ್ತು. ಈ ತಂಡದಲ್ಲಿ ದಿವ್ಯಾ ಭಾಗಿಯಾಗಿದ್ದರು. 2022 ರ ಚೆಸ್ ಒಲಿಂಪಿಯಾಡ್ನಲ್ಲಿ ಕಂಚಿನ ಪದಕ ಪಡೆದಿದ್ದಾರೆ.