ಬ್ರಿಟನ್, ಜು. 30 (DaijiworldNews/AK):ಇಂಗ್ಲೆಂಡ್ ಮತ್ತು ಭಾರತ ನಡುವಿನ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಉಭಯ ತಂಡಗಳು ಮಹತ್ವದ ಬದಲಾವಣೆ ಯಾಗಿದೆ.ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಮತ್ತು ಭಾರತದ ವೇಗಿ ಜಸ್ಪ್ರಿತ್ ಬುಮ್ರಾ ಇಬ್ಬರೂ ಓವಲ್ನಲ್ಲಿ ಸರಣಿ ನಿರ್ಣಾಯಕ ಪಂದ್ಯದಿಂದ ಹೊರಗುಳಿದಿದ್ದಾರೆ.

ಓಲ್ಡ್ ಟ್ರಾಫರ್ಡ್ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ಭುಜದ ಗಾಯದಿಂದಾಗಿ ಸ್ಟೋಕ್ಸ್ ಅಂತಿಮ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಬುಧವಾರ ದೃಢಪಡಿಸಿದೆ.
ಉಪನಾಯಕ ಓಲಿ ಪೋಪ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ತಂಡವನ್ನು ಮುನ್ನಡೆಸಲಿದ್ದಾರೆ. ಇಂಗ್ಲೆಂಡ್ ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆಯಲ್ಲಿದೆ. ಇಂಗ್ಲೆಂಡ್ ಪರ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಸ್ಟೋಕ್ಸ್, ಸರಣಿಯಲ್ಲಿ 17 ವಿಕೆಟ್ಗಳನ್ನು ಪಡೆದಿದ್ದರು. ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಕೂಡ ಆಗಿದ್ದಾರೆ.