ಕಾರ್ಕಳ, ಆ. 01 (DaijiworldNews/AA): ಕಾರ್ಕಳದ ಕ್ರೈಸ್ಟ್ಕಿಂಗ್ ಸಂಸ್ಥೆಯ ನಾಲ್ಕು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಮತ್ತು ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಕಾರ್ಕಳದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಕ್ರೈಸ್ಟ್ಕಿಂಗ್ ಸಂಸ್ಥೆಯ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಪ್ರಾಥಮಿಕ ವಿಭಾಗದಿಂದ 8ನೇ ತರಗತಿಯ ಮೌಲ್ಯ, ಪ್ರೌಢಶಾಲಾ ವಿಭಾಗದಿಂದ 9ನೇ ತರಗತಿಯ ವರುಣ್ ಕಾಮತ್, 10ನೇ ತರಗತಿಯ ಸೋಹನ್ ಮತ್ತು ಅಕ್ಷಿತಾ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.