ಬೆಂಗಳೂರು , ಸೆ. 15 (DaijiworldNews/AK): 2025 ರ ಏಷ್ಯಾಕಪ್ನಲ್ಲಿ ಭಾರತ ತಂಡ ಅಮೋಘ ಪ್ರದರ್ಶನ ನೀಡಿ ಅಗ್ರಸ್ಥಾನದಲ್ಲಿದೆ. ಲೀಗ್ ಹಂತದಲ್ಲಿ ತನ್ನ ಎರಡೂ ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾ ಸೂಪರ್ -4 ರಲ್ಲಿ ಸ್ಥಾನ ಪಡೆದುಕೊಂಡಿದೆ. ಭಾರತ ತಂಡವು ತನ್ನ ಮೊದಲ ಪಂದ್ಯದಲ್ಲಿ ಯುಎಇಯನ್ನು 9 ವಿಕೆಟ್ಗಳಿಂದ ಸೋಲಿಸಿತು. ಬಳಿಕ ತನ್ನ ಎರಡನೇ ಪಂದ್ಯದಲ್ಲಿ ಪಾಕಿಸ್ತಾನವನ್ನು 7 ವಿಕೆಟ್ಗಳಿಂದ ಸೋಲಿಸಿತು.

ಇದೀಗ ಗುಂಪು ಹಂತದ ಕೊನೆಯ ಪಂದ್ಯಕ್ಕೆ ಸೂರ್ಯಕುಮಾರ್ ಪಡೆ ಸಜ್ಜಾಗುತ್ತಿದೆ. ಮುಂದಿನ ಪಂದ್ಯವನ್ನು ಓಮನ್ ವಿರುದ್ಧ ಟೀಮ್ ಇಂಡಿಯಾ ಆಡಲಿದೆ. ಟೀಮ್ ಇಂಡಿಯಾದ ದೀರ್ಘ ವಿರಾಮದ ಬಳಿಕ ಈ ಪಂದ್ಯವು ಸೆಪ್ಟೆಂಬರ್ 19 ಶುಕ್ರವಾರದಂದು ನಡೆಯಲಿದೆ.
ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8:00 ಗಂಟೆಗೆ ಆರಂಭವಾಗಲಿದೆ. ಪಂದ್ಯ ಪ್ರಾರಂಭವಾಗುವ ಅರ್ಧ ಗಂಟೆ ಮೊದಲು ಅಂದರೆ ಸಂಜೆ 7:30 ಕ್ಕೆ ಟಾಸ್ ನಡೆಯಲಿದೆ. ಈ ಪಂದ್ಯವು ಅಬುದಾಬಿಯ ಶೇಖ್ ಝಯೇದ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ, ಹರ್ಷಿತ್ ಸಿಂಗ್, ಜರುನ್. ಮೀಸಲು ಆಟಗಾರರು: ಪ್ರಸಿದ್ಧ್ ಕೃಷ್ಣ, ವಾಷಿಂಗ್ಟನ್ ಸುಂದರ್, ರಿಯಾನ್ ಪರಾಗ್, ಧ್ರುವ್ ಜುರೆಲ್ ಮತ್ತು ಯಶಸ್ವಿ ಜೈಸ್ವಾಲ್.
ಓಮನ್ ತಂಡ: ಜತೀಂದರ್ ಸಿಂಗ್ (ನಾಯಕ), ಹಮ್ಮದ್ ಮಿರ್ಜಾ, ವಿನಾಯಕ್ ಶುಕ್ಲಾ, ಸುಫ್ಯಾನ್ ಯೂಸುಫ್, ಆಶಿಶ್ ಒಡೆಡೆರಾ, ಅಮೀರ್ ಕಲೀಮ್, ಮೊಹಮ್ಮದ್ ನದೀಮ್, ಸುಫ್ಯಾನ್ ಮೆಹಮೂದ್, ಆರ್ಯನ್ ಬಿಶ್ತ್, ಕರಣ್ ಸೋನಾವಾಲೆ, ಜಿಕ್ರಿಯಾ ಇಸ್ಲಾಂ, ಹಸ್ನೇನ್ ಅಲಿ, ಶಾಹಮ್ಮದ್, ಮೊಹಮ್ಮದ್, ಶಾಕೆ ಅಹ್ಮದ್, ಸಮಯ್ ಶ್ರೀವಾಸ್ತವ.