ನವದೆಹಲಿ, ಸೆ. 20 (DaijiworldNews/AA): ಏಷ್ಯಾಕಪ್ನ ಲೀಗ್ ಹಂತ ಮುಕ್ತಾಯಗೊಂಡಿದೆ. ಭಾರತ ಹಾಗೂ ಒಮಾನ್ ನಡುವೆ ನಡೆದ ಲೀಗ್ ಸುತ್ತಿನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿತು. ತಂಡದ ಬೌಲಿಂಗ್ ವಿಭಾಗವನ್ನ ಮುನ್ನಡೆಸಿದ್ದ ಅರ್ಷದೀಪ್ ಈ ಪಂದ್ಯದಲ್ಲಿ ವಿಶೇಷ ಶತಕ ಪೂರೈಸಿದರು.

ಎರಡು ಬದಲಾವಣೆಗಳನ್ನು ಮಾಡಲಾಗಿತ್ತು. ಅದರಂತೆ ಹರ್ಷಿತ್ ರಾಣಾ ಹಾಗೂ ಅರ್ಷದೀಪ್ ಸಿಂಗ್ ಈ ಪಂದ್ಯದಲ್ಲಿ ಆಡುವ ಅವಕಾಶ ಪಡೆದಿದ್ದರು. ಅರ್ಷದೀಪ್ ಸಿಂಗ್ ಒಮಾನ್ ವಿರುದ್ಧದ ಪಂದ್ಯದಲ್ಲಿ ತಮ್ಮ ಮೊದಲ ವಿಕೆಟ್ ಪಡೆದ ತಕ್ಷಣ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಈ ಸ್ವರೂಪದಲ್ಲಿ 100 ವಿಕೆಟ್ಗಳನ್ನು ಗಳಿಸಿದ ಮೊದಲ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
2022 ರಲ್ಲಿ ಟೀಂ ಇಂಡಿಯಾ ಪರ ಟಿ20ಗೆ ಪಾದಾರ್ಪಣೆ ಮಾಡಿದ ಅರ್ಷದೀಪ್, ಕೇವಲ ಮೂರು ವರ್ಷಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಇದು ಅವರ ಟಿ20 ಅಂತರರಾಷ್ಟ್ರೀಯ ವೃತ್ತಿಜೀವನದ ಕೇವಲ 64 ನೇ ಪಂದ್ಯವಾಗಿದ್ದು, ಕಡಿಮೆ ಪಂದ್ಯಗಳಲ್ಲಿ 100 ವಿಕೆಟ್ಗಳನ್ನು ಪೂರೈಸಿದ ಸಾಧನೆ ಮಾಡಿದ್ದಾರೆ.