ಮುಂಬೈ, ಸೆ. 24 (DaijiworldNews/AK): ಏಷ್ಯಾಕಪ್ ಟೂರ್ನಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 15 ಪಂದ್ಯಗಳು ಮುಗಿದಿದ್ದು, ಇನ್ನುಳಿದಿರುವುದು ಕೇವಲ 3 ಮ್ಯಾಚ್ಗಳು ಮಾತ್ರ. ಈ ಮೂರು ಪಂದ್ಯಗಳೊಂದಿಗೆ ಈ ಬಾರಿಯ ಏಷ್ಯಾಕಪ್ನಲ್ಲಿ ಫೈನಲ್ ಆಡಲಿರುವ ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ.

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಫೈನಲ್ಗೆ ಪ್ರವೇಶಿಸುವುದು ಖಚಿತ. ಒಂದು ವೇಳೆ ಬಾಂಗ್ಲಾದೇಶ್ ತಂಡ ಜಯ ಸಾಧಿಸಿದರೆ, ಪಾಕಿಸ್ತಾನ್ ತಂಡದ ಫೈನಲ್ ಹಾದಿ ಕಠಿಣವಾಗಲಿದೆ.
ಟೀಮ್ ಇಂಡಿಯಾ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಗೆದ್ದರೆ ನೇರವಾಗಿ ಫೈನಲ್ಗೆ ಎಂಟ್ರಿ ಕೊಡಲಿದೆ. ಏಕೆಂದರೆ ಪಾಕಿಸ್ತಾನ್ ತಂಡವು ಈಗಾಗಲೇ 2 ಪಂದ್ಯಗಳನ್ನಾಡಿದ್ದು, ಮುಂದಿನ ಮ್ಯಾಚ್ನಲ್ಲಿ ಗೆದ್ದರೂ ಒಟ್ಟು 4 ಅಂಕಗಳನ್ನು ಮಾತ್ರ ಪಡೆಯಲಿದೆ. ಅತ್ ಪಾಕ್ ತಂಡ ತನ್ನ ಕೊನೆಯ ಪಂದ್ಯವಾಡಬೇಕಿರುವುದು ಬಾಂಗ್ಲಾದೇಶ್ ವಿರುದ್ಧ. ಅಂದರೆ ಪಾಕ್ ಅಥವಾ ಬಾಂಗ್ಲಾದೇಶ್ ತಂಡ ತಮ್ಮ ಕೊನೆಯ ಪಂದ್ಯದಲ್ಲಿ ಗೆದ್ದರೂ ಭಾರತ ತಂಡದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.
ಹೀಗಾಗಿಯೇ ಭಾರತ ತಂಡವು ಮುಂದಿನ 2 ಮ್ಯಾಚ್ಗಳಲ್ಲಿ ಒಂದು ಗೆಲುವು ದಾಖಲಿಸಿದರೆ ಫೈನಲ್ಗೆ ಎಂಟ್ರಿ ಕೊಡುವುದು ಖಚಿತ. ಇಂದಿನ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಟೀಮ್ ಇಂಡಿಯಾ ಗೆದ್ದರೆ ನೇರವಾಗಿ ಫೈನಲ್ಗೆ ಅರ್ಹತೆ ಪಡೆಯಲಿದೆ.