ದುಬೈ, ಸೆ. 26 (DaijiworldNews/AK):ಸೂಪರ್ 4 ಪಂದ್ಯದಲ್ಲಿ ಬಾಂಗ್ಲಾದೇಶ ತಂಡಕ್ಕೆ 11 ರನ್ಗಳ ಸೋಲುಣಿಸಿದ ಪಾಕಿಸ್ತಾನ ತಂಡ ಏಷ್ಯಾಕಪ್ ಫೈನಲ್ ಪ್ರವೇಶಿಸಿದೆ. ಇದರಿಂದ ಇದೇ ಮೊದಲ ಬಾರಿಗೆ ಟೂರ್ನಿಯ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.

1984ರಲ್ಲಿ ಏಷ್ಯಾ ಕಪ್ ಪ್ರಾರಂಭವಾದ ಬಳಿಕ ಈವರೆಗೆ ಒಟ್ಟು 16 ಬಾರಿ ಉಭಯ ತಂಡಗಳ ನಡುವೆ ಪಂದ್ಯಾವಳಿ ಜರುಗಿದೆ. ಆದ್ರೆ ಈವರೆಗೂ ಕ್ರಿಕೆಟ್ನ ಸಾಂಪ್ರದಾಯಿಕ ಎದುರಾಳಿಗಳಾದ ಪಾಕಿಸ್ತಾನ ಮತ್ತು ಭಾರತ ಫೈನಲ್ ತಲುಪಿದ್ದಿಲ್ಲ. ಇದೀಗ ಭಾನುವಾರದಂದು ನಡೆಯಲಿರುವ ಪಂದ್ಯ ಹೈವೋಲ್ಟೇಜ್ ಪಂದ್ಯವಾಗಲಿದೆ.
ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಸೂಪರ್ ಫೋರ್ ಹಂತದ ನಿರ್ಣಾಯಕ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 135 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಬಾಂಗ್ಲಾದೇಶ ತಂಡ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 124 ರನ್ ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು.