ಮುಂಬೈ, ಅ. 02 (DaijiworldNews/AK): ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಫ್ರಾಂಚೈಸಿ ಮಾಲೀಕರು ಬದಲಾಗುವುದು ಬಹುತೇಕ ಖಚಿತವಾಗಿದೆ.

ಆರ್ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದ್ದು, ಇದರ ಬೆನ್ನಲ್ಲೇ ರಾಯಲ್ ಫ್ರಾಂಚೈಸಿ ಖರೀದಿಗೆ ಖ್ಯಾತ ಉದ್ಯಮ ಆದಾರ್ ಪೂನಾವಾಲ ಆಸಕ್ತಿ ತೋರಿದ್ದಾರೆ ಎಂದು ವರದಿಯಾಗಿದೆ.
ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್ ಪೂನವಾಲ ಈ ಬಗ್ಗೆ ಡಿಯಾಜಿಯೋ ಕಂಪೆನಿ ಜೊತೆ ಮಾತುಕತೆ ನಡೆಸಿದ್ದು, ಈ ಮಾತುಕತೆ ಯಶಸ್ವಿಯಾದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಫ್ರಾಂಚೈಸಿ ಪುಣೆ ಮೂಲದ ಉದ್ಯಮಿ ಪಾಲಾಗಲಿದೆ.
ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿದೆ. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್ಸಿಬಿ ಫ್ರಾಂಚೈಸಿಯನ್ನು ಹೊಂದಿದೆ. ಇದೀಗ ಡಿಯಾಜಿಯೋ ಕಂಪೆನಿಯು ಆರ್ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಮುಂದಾಗಿದೆ.