ಮುಂಬೈ, ಅ. 04 (DaijiworldNews/AA): ಇದೇ ಅಕ್ಟೋಬರ್ 1ರಿಂದ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ 5 ಪಂದ್ಯಗಳ ಟಿ20 ಸರಣಿಗೆ ಬಿಸಿಸಿಐ ಟೀಂ ಇಂಡಿಯಾದ ತಂಡವನ್ನ ಪ್ರಕಟಿಸಿದ್ದು, ಭಾರತ ಏಕದಿನ ತಂಡದ ನಾಯಕನಾಗಿ ಶುಭ್ಮನ್ ಗಿಲ್ ಆಯ್ಕೆಯಾಗಿದ್ದಾರೆ.

ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಏಕದಿನ ಸರಣಿ ಮೂಲಕ ಗಿಲ್ ಏಕದಿನ ತಂಡದ ನಾಯಕನಾಗಿ ಪಾದಾರ್ಪಣೆ ಮಾಡಲಿದ್ದಾರೆ. ಇದಕ್ಕೂ ಮುನ್ನ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಆಡಿತ್ತು. ಇದೀಗ ಟೀಮ್ ಇಂಡಿಯಾದ ನಾಯಕತ್ವ ಬದಲಿಸಲು ಬಿಸಿಸಿಐ ತೀರ್ಮಾನಿಸಿದೆ.
ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಸರಣಿಗಾಗಿ ಆಯ್ಕೆ ಮಾಡಲಾಗಿರುವ ಏಕದಿನ ತಂಡದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಸ್ಥಾನ ಪಡೆದಿದ್ದಾರೆ. ಈ ಸರಣಿಯ ಬಳಿಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಮಾತ್ರ ತಂಡದಲ್ಲಿ ಮುಂದುವರೆಯಲಿದ್ದಾರೆ.