ಮುಂಬೈ, ಅ. 17 (DaijiworldNews/AA):ಏಕದಿನ ಸರಣಿಗಾಗಿ ಭಾರತೀಯ ಕ್ರಿಕೆಟ್ ತಂಡ ಆಸ್ಟ್ರೇಲಿಯಾಕ್ಕೆ ತೆರಳಿದೆ. ಅಕ್ಟೋಬರ್ 19 ರಂದು ಪರ್ತ್ನಲ್ಲಿ ಪ್ರಾರಂಭವಾಗುವ ಈ ಸರಣಿಯಲ್ಲಿ ಮೂರು ಪಂದ್ಯಗಳು ನಡೆಯಲಿವೆ.

ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮತ್ತೊಮ್ಮೆ ಸರಣಿಯಲ್ಲಿ ಆಡುವುದನ್ನು ಕಾಣಬಹುದು. ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ಏಳು ತಿಂಗಳ ವಿರಾಮದ ನಂತರ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮತ್ತೆ ಮೈದಾನಕ್ಕೆ ಇಳಿಯಲಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯ ಭಾನುವಾರ (ಅಕ್ಟೋಬರ್ 19) ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಆರಂಭವಾಗಲಿದ್ದು, ಟಾಸ್ ಬೆಳಿಗ್ಗೆ 8:30 ಕ್ಕೆ ನಡೆಯಲಿದೆ.
ಈ ಸರಣಿ ಮೂಲಕ ಶುಭ್ಮನ್ ಗಿಲ್ ಮೊದಲ ಬಾರಿಗೆ ಭಾರತದ ಏಕದಿನ ತಂಡವನ್ನು ಮುನ್ನಡೆಸಲಿದ್ದಾರೆ. ಅವರು ಈ ಹಿಂದೆ ಟಿ20 ಮತ್ತು ಟೆಸ್ಟ್ಗಳಲ್ಲಿ ಕ್ಯಾಪ್ಟನ್ ಆಗಿ ಸೇವೆ ಸಲ್ಲಿಸಿದ್ದಾರೆ, ಆದರೆ ಇದು ಏಕದಿನ ಪಂದ್ಯಗಳಲ್ಲಿ ಅವರಿಗೆ ಮೊದಲ ಅವಕಾಶವಾಗಿದೆ. ಮತ್ತೊಂದು ವಿಶೇಷ ಎಂದರೆ ಗಿಲ್ ನಾಯಕತ್ವದಡಿಯಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಂತಹ ಹಿರಿಯ ಆಟಗಾರರು ಹೇಗೆ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂಬುದನ್ನು ನೋಡುವುದು ಆಸಕ್ತದಾಯಕವಾಗಿದೆ.
ಭಾರತ ತಂಡ: ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್, ನಿತೀಶ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ಸಿಂಗ್ ರಾಣಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕಾನೊಲಿ, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಕ್ಯಾಮರೂನ್ ಗ್ರೀನ್, ಜೋಶ್ ಹ್ಯಾಜಲ್ವುಡ್, ಟ್ರಾವಿಸ್ ಹೆಡ್, ಮ್ಯಾಥ್ಯೂ ಕುಹ್ನೆಮನ್, ಮಿಚೆಲ್ ಓವನ್, ಜೋಶ್ ಫಿಲಿಪ್, ಮ್ಯಾಥ್ಯೂ ರೆನ್ಶಾ, ಮ್ಯಾಥ್ಯೂ ಶಾರ್ಟ್, ಮಿಚೆಲ್ ಸ್ಟಾರ್ಕ್.