ಕಾರ್ಕಳ, ಅ. 31 (DaijiworldNews/AA): ಕಾರ್ಕಳದ ಕ್ರೈಸ್ಟ್ಕಿಂಗ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸುಧೀಶ್ ಎಸ್ ಶೆಟ್ಟಿ ಅವರು ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಅಥ್ಲೆಟಿಕ್ಸ್ ಕೂಟದಲ್ಲಿ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ತಮ್ಮ ಸಂಸ್ಥೆಗೆ ಹೆಮ್ಮೆ ತಂದಿದ್ದಾರೆ.

ಈ ಸ್ಪರ್ಧೆಯನ್ನು ಕರ್ನಾಟಕ ಸರ್ಕಾರದ ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲಾಡಳಿತ ಮತ್ತು ಉಡುಪಿ ಜಿಲ್ಲಾ ಪಿ.ಯು. ಕಾಲೇಜು ಪ್ರಾಂಶುಪಾಲರ ಸಂಘದ ಆಶ್ರಯದಲ್ಲಿ ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.
ಬೆಳ್ಳಿ ಪದಕ ಗಳಿಸುವ ಮೂಲಕ ಸುಧೀಶ್ ಅವರು ರಾಜ್ಯಮಟ್ಟದ ಅಥ್ಲೆಟಿಕ್ ಕೂಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲು ಅರ್ಹತೆ ಪಡೆದಿದ್ದಾರೆ.