ಮುಂಬೈ, ನ. 03 (DaijiworldNews/AA): 2025 ರ ಮಹಿಳಾ ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಆತಿಥೇಯ ಭಾರತ, ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಚೊಚ್ಚಲ ಮಹಿಳಾ ವಿಶ್ವಕಪ್ ಕ್ರಿಕೆಟ್ ಚಾಂಪಿಯನ್ ಆಗಿ ಭಾರತ ಹೊಮ್ಮಿದೆ.

ಮೊದಲು ಬ್ಯಾಟ್ ಬೀಸಿದ ಭಾರತ 50 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 298 ರನ್ ಗಳಿಸಿತು. ಕಠಿಣ ಗುರಿಯನ್ನು ಬೆನ್ನೆಟ್ಟಿದ ಆಫ್ರಿಕಾ 45.3 ಓವರ್ಗಳಲ್ಲಿ 246 ರನ್ಗಳಿಸಿ ಆಲೌಟ್ ಆಯಿತು. ಆಫ್ರಿಕಾ ವಿರುದ್ಧ 52 ರನ್ಗಳ ಜಯ ಸಾಧಿಸಿ ಭಾರತ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಎತ್ತಿಹಿಡಿದಿದೆ.
ಹರ್ಮನ್ಪ್ರೀತ್ ಕೌರ್ ನಾಯಕತ್ವದಲ್ಲಿ ಭಾರತ ತಂಡದ ವನಿತೆಯರು ಚೊಚ್ಚಲ ಏಕದಿನ ವಿಶ್ವಕಪ್ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಐಸಿಸಿ ಏಕದಿನ ವಿಶ್ವಕಪ್ ಗೆದ್ದ ಭಾರತದ 3ನೇ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೆ ಹರ್ಮನ್ಪ್ರೀತ್ ಕೌರ್ ಪಾತ್ರರಾಗಿದ್ದಾರೆ.
ವಿಶ್ವಕಪ್ ಗೆದ್ದ ವನಿತೆಯರು ಅಂದ್ರೆ ಸುಮಾರು 39.78 ಕೋಟಿ ರೂ. ತಮ್ಮದಾಗಿಸಿಕೊಂಡಿದೆ. ಇದರೊಂದಿಗೆ ಬಿಸಿಸಿಐ 51 ಕೋಟಿ ಮೊತ್ತದ ಬಹುಮಾನ ಘೋಷಿಸಿದ್ದಾರೆ. ಈ ಮೂಲಕ ಟೀಂ ಇಂಡಿಯಾ 90 ಕೋಟಿ ರೂ.ಗೂ ಅಧಿಕ ಮೊತ್ತದ ನಗದು ಬಹುಮಾನವನ್ನು ಬಾಚಿಕೊಂಡಿದೆ.