ಕಾರ್ಕಳ, ನ. 04 (DaijiworldNews/AA): ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಪಿ.ಯು. ಕಾಲೇಜಿನ ವಿದ್ಯಾರ್ಥಿನಿಯರಾದ ಪ್ರಥಮ ವಿಜ್ಞಾನ ವಿಭಾಗದ ಶ್ರವ್ಯಾ ಶೆಟ್ಟಿ ಮತ್ತು ಪ್ರಥಮ ವಾಣಿಜ್ಯ ವಿಭಾಗದ ವರುಣಾ ಶೆಟ್ಟಿ ಅವರು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಈ ಪಂದ್ಯಾವಳಿಯನ್ನು ಕರ್ನಾಟಕ ಸರ್ಕಾರದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ರಾಮನಗರ ಜಿಲ್ಲೆಯ ಕನಕಪುರದಲ್ಲಿರುವ ರೂರಲ್ ಪಿ.ಯು. ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.
ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿದ್ದ ಕ್ರೈಸ್ಟ್ ಕಿಂಗ್ ಪಿ.ಯು. ಕಾಲೇಜಿನ ಈ ಆಟಗಾರ್ತಿಯರು, ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ, ರಾಜ್ಯ ಮಟ್ಟದಲ್ಲಿ ತಮ್ಮ ತಂಡವನ್ನು ವಿಜಯಶಾಲಿಯನ್ನಾಗಿ ಮಾಡಿ ಕಾಲೇಜು ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.