ಕಾರ್ಕಳ, ನ. 16 (DaijiworldNews/AA): ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ೮ನೇ ತರಗತಿಯ ವಿದ್ಯಾರ್ಥಿ ಅಭಿಷ್ ಅವರು ರಾಜ್ಯ ಮಟ್ಟದ ಅಥ್ಲೆಟಿಕ್ಸ್ಗೆ ಪ್ರಥಮ ಸ್ಥಾನ ಗಳಿಸಿ ಅರ್ಹತೆ ಪಡೆಯುವ ಮೂಲಕ ತಮ್ಮ ಸಂಸ್ಥೆಗೆ ಹೆಮ್ಮೆ ತಂದಿದ್ದಾರೆ.

ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಮತ್ತು ಬೈಂದೂರಿನ ಕಿರಿಮಂಜೇಶ್ವರದ ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.
ಅಭಿಷ್ ಅವರು 14 ವರ್ಷದೊಳಗಿನವರ ವಿಭಾಗದಲ್ಲಿ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ಹಾಸನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಅಥ್ಲೆಟಿಕ್ಸ್ಗೆ ಅರ್ಹತೆ ಪಡೆದಿದ್ದಾರೆ.
ಅಭಿಷ್ ಅವರ ಈ ಸಾಧನೆಗಾಗಿ ಶಾಲಾ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಅಭಿನಂದಿಸಿದ್ದಾರೆ.