ಮುಂಬೈ, ಜ. 16 (DaijiworldNews/AK): ಭಾರತದಲ್ಲಿ ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ನಡೆಯುತ್ತಿದೆ. ಆ ಬಳಿಕ ಹರ್ಮನ್ಪ್ರೀತ್ ಕೌರ್ ಪಡೆ ಏಕದಿನ, ಟಿ20 ಮತ್ತು ಏಕೈಕ ಟೆಸ್ಟ್ ಪಂದ್ಯದ ಸರಣಿಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಟೀಂ ಇಂಡಿಯಾದ ಈ ಪ್ರವಾಸದ ವೇಳಾಪಟ್ಟಿಯನ್ನು ಬಿಸಿಸಿಐ 2025 ರಲ್ಲೇ ಪ್ರಕಟಿಸಿತ್ತು.

ಈ 3 ಸರಣಿಗಳಿಗಾಗಿ ಭಾರತ, ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ ಹರ್ಮನ್ಪ್ರೀತ್ ಕೌರ್ ನೇತೃತ್ವದ ಟೀಂ ಇಂಡಿಯಾ ಮೂರು ಏಕದಿನ ಮತ್ತು ಮೂರು ಟಿ20 ಹಾಗೂ ಏಕೈಕ 4 ದಿನಗಳ ಟೆಸ್ಟ್ ಪಂದ್ಯವನ್ನು ಆಡಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ20ಪಂದ್ಯ ಫೆಬ್ರವರಿ 15 ರಂದು ಸಿಡ್ನಿಯಲ್ಲಿ ನಡೆಯಲಿದೆ. ಎರಡನೇ ಟಿ20ಪಂದ್ಯ ಫೆಬ್ರವರಿ 19 ರಂದು ಹೋಬಾರ್ಟ್ನಲ್ಲಿ ನಡೆಯಲಿದೆ. ಮೂರನೇ ಪಂದ್ಯ ಫೆಬ್ರವರಿ 21 ರಂದು ಅಡಿಲೇಡ್ ಓವಲ್ನಲ್ಲಿ ನಡೆಯಲಿದೆ.
ಆ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ಫೆಬ್ರವರಿ 24 ರಂದು ಆರಂಭವಾಗಲಿದೆ. ಮೊದಲ ಪಂದ್ಯ ಬ್ರಿಸ್ಬೇನ್ನಲ್ಲಿ ನಡೆಯಲಿದ್ದು, ಎರಡನೇ ಏಕದಿನ ಪಂದ್ಯ ಫೆಬ್ರವರಿ 27 ರಂದು ಹೋಬಾರ್ಟ್ನಲ್ಲಿ ನಡೆಯಲಿದೆ. ಮೂರನೇ ಏಕದಿನ ಪಂದ್ಯ ಮಾರ್ಚ್ 1 ರಂದು ಹೋಬಾರ್ಟ್ನಲ್ಲಿ ನಡೆಯಲಿದೆ. ಅಂತಿಮವಾಗಿ ಮಾರ್ಚ್ 6 ರಿಂದ 9 ರವರೆಗೆ ಏಕೈಕ ಹಗಲು-ರಾತ್ರಿ ಟೆಸ್ಟ್ ಪಂದ್ಯ ನಡೆಯಲಿದೆ.