ಗುವಾಹಟಿ, ಮಾ. 31(DaijiworldNews/AK): ಬೌಲರ್ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ 8 ವಿಕೆಟ್ಗಳ ಜಯ ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಟಾಸ್ ಸೋತು ಮೊದಲು ಬ್ಯಾಟ್ ಬೀಸಿದ ಚೆನ್ನೈ 19.4 ಓವರ್ಗಳಲ್ಲಿ 127 ರನ್ ಗಳಿಸಿ ಆಲೌಟ್ ಆಯ್ತು. ಅದನ್ನು ಬೆನ್ನಟ್ಟಿದ ಆರ್ಆರ್ 12.1 ಓವರ್ಗಳಲ್ಲಿ2 ವಿಕೆಟ್ ನಷ್ಟಕ್ಕೆ 128 ರನ್ ಹೊಡೆದು ಜಯಭೇರಿ ಬಾರಿಸಿತು.
ಸೂರ್ಯವಂಶಿ 15 ಎಸೆತಕ್ಕೆ ಅರ್ಧಶತಕ ಸಿಡಿಸಿ ಅಂತಿಮವಾಗಿ 52 ರನ್(17 ಎಸೆತ, 4 ಬೌಂಡರಿ, 5 ಸಿಕ್ಸ್) ಸಿಡಿಸಿ ಕ್ಯಾಚ್ ನೀಡಿ ಔಟಾದರು. ಕೇವಲ 15 ಎಸೆತಗಳಲ್ಲಿ ಐಪಿಎಲ್ ಇತಿಹಾಸದಲ್ಲಿ ಮೂರನೇ ವೇಗದ ಅರ್ಧಶತಕ ಬಾರಿಸಿದ ಹೆಗ್ಗಳಿಕೆಗೆ ಸೂರ್ಯವಂಶಿ ಪಾತ್ರವಾಗಿದ್ದಾರೆ.