ನವದೆಹಲಿ,ಏ. 01 (DaijiworldNews/AK): ಇಂಡಿಯನ್ ಪ್ರೀಮಿಯರ್ ಲೀಗ್ನ ಉದ್ಘಾಟನಾ ಪಂದ್ಯದಲ್ಲಿ ಜಯ ಸಾಧಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದೀಗ ದ್ವಿತೀಯ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ.

ಆರ್ಸಿಬಿ ತನ್ನ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ತಂಡವನ್ನು ಎದುರಿಸಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯವು ಏಪ್ರಿಲ್ 5 ರಂದು ನಡೆಯಲಿದೆ. ಆರ್ಸಿಬಿ-ಸಿಎಸ್ಕೆ ನಡುವಣ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಪಂದ್ಯವು ಭಾನುವಾರ ರಾತ್ರಿ 7.30 ರಿಂದ ಶುರುವಾಗಲಿದೆ.
ಆರ್ಸಿಬಿ ತಂಡದ ತವರು ಮೈದಾನವಾದ ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಈ ಪಂದ್ಯವು ಅತ್ಯಂತ ರೋಚಕವಾಗಿರಲಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಎಂಎಸ್ ಧೋನಿ, ಸಂಜು ಸ್ಯಾಮ್ಸನ್, ಡೆವಾಲ್ಡ್ ಬ್ರೆವಿಸ್, ಉರ್ವಿಲ್ ಪಟೇಲ್, ಶಿವಂ ದುಬೆ, ಜೇಮಿ ಓವರ್ಟನ್, ರಾಮಕೃಷ್ಣ ಘೋಷ್, ನೂರ್ ಅಹ್ಮದ್, ಖಲೀಲ್ ಅಹ್ಮದ್, ಅನ್ಶುಲ್ ಕಂಬೋಜ್, ಗುರ್ಜಪ್ನೀತ್ ಸಿಂಗ್, ಶ್ರೇಯಸ್ ಗೋಪಾಲ್, ಮುಖೇಶ್ ಚೌಧರಿ, ನಾಥನ್ ಎಲ್ಲಿಸ್, ಅಕೇಲ್ ಹೊಸೈನ್, ಪ್ರಶಾಂತ್ ವೀರ್, ಕಾರ್ತಿಕ್ ಶರ್ಮಾ, ಮ್ಯಾಥ್ಯೂ ಶಾರ್ಟ್, ಅಮನ್ ಖಾನ್, ಸರ್ಫರಾಝ್ ಖಾನ್, ಮ್ಯಾಟ್ ಹೆನ್ರಿ, ರಾಹುಲ್ ಚಹರ್, ಝಾಕ್ ಫೌಲ್ಕ್ಸ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಯಶ್ ದಯಾಳ್, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್.
ಆರ್ಸಿಬಿ ತಂಡದ ಏಪ್ರಿಲ್ ತಿಂಗಳ ವೇಳಾಪಟ್ಟಿ ಹೀಗಿದೆ:
ಏಪ್ರಿಲ್ 15: ಚೆನ್ನೈ ಸೂಪರ್ ಕಿಂಗ್ಸ್ (ಬೆಂಗಳೂರು)
ಏಪ್ರಿಲ್ 10: ರಾಜಸ್ಥಾನ್ ರಾಯಲ್ಸ್ (ಗುವಾಹಟಿ)
ಏಪ್ರಿಲ್ 12: ಮುಂಬೈ ಇಂಡಿಯನ್ಸ್ (ಮುಂಬೈ)
ಏಪ್ರಿಲ್ 15: ಲಕ್ನೋ ಸೂಪರ್ ಜೈಂಟ್ಸ್ (ಬೆಂಗಳೂರು)
ಏಪ್ರಿಲ್ 18: ಡೆಲ್ಲಿ ಕ್ಯಾಪಿಟಲ್ಸ್ (ಬೆಂಗಳೂರು)
ಏಪ್ರಿಲ್ 24: ಗುಜರಾತ್ ಟೈಟಾನ್ಸ್ (ಬೆಂಗಳೂರು)
ಏಪ್ರಿಲ್ 27: ಡೆಲ್ಲಿ ಕ್ಯಾಪಿಟಲ್ಸ್ (ದೆಹಲಿ)
ಏಪ್ರಿಲ್ 30: ಗುಜರಾತ್ ಟೈಟಾನ್ಸ್ (ಅಹಮದಾಬಾದ್) ಜೊತೆ ಆರ್ಸಿಬಿ ತಂಡ ಆಡಲಿದೆ.