ಬೆಂಗಳೂರು, ಏ. 05 (DaijiworldNews/AA): ಐಪಿಎಲ್ 2026 ರ 11ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 43 ರನ್ಗಳ ಭರ್ಜರಿ ಜಯ ಸಾಧಿಸಿದೆ. ಮೊದಲ ಪಂದ್ಯವನ್ನ ಗೆಲುವಿನೊಂದಿಗೆ ಶುಭಾರಂಭ ಮಾಡಿದ್ದ ಆರ್ಸಿಬಿ ತನ್ನ ಗೆಲುವಿನ ಓಟವನ್ನು ಮುಂದುವರೆಸಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್ಕೆ ನಾಯಕ ರುತುರಾಜ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ 20 ಓವರ್ಗಳಲ್ಲಿ 3 ವಿಕೆಟ್ಗಳ ನಷ್ಟಕ್ಕೆ 250 ರನ್ ಗಳಿಸಿತು. ಈ ಬೃಹತ್ ಗುರಿಯನ್ನು ಬೆನ್ನಟ್ಟಿದ ಸಿಎಸ್ಕೆ 19.4 ಓವರ್ಗಳಲ್ಲಿ 10 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿ ಸೋತಿತು.
ಬ್ಯಾಟಿಂಗ್ನಲ್ಲಿ ತಂಡದ ನಾಯಕ ರಜತ್ ಪಾಟಿದರ್, ದೇವದತ್ ಪಡಿಕ್ಕಲ್ ಫಿಲ್ ಸಾಲ್ಟ್ ಜೊತೆಗೆ ಟಿಮ್ ಡೇವಿಡ್ ಉತ್ತಮ ಪ್ರದರ್ಶನ ನೀಡಿದ್ದಾರೆ. ಟಿಮ್ ಡೇವಿಡ್ 25 ಎಸೆತಗಳಲ್ಲಿ 70 ರನ್, ದೇವದತ್ ಪಡಿಕ್ಕಲ್ 29 ಎಸೆತಗಳಲ್ಲಿ 50 ರನ್, ರಜತ್ ಪಾಟಿದಾರ್ 19 ಎಸೆತಗಳಲ್ಲಿ 48 ರನ್, ಫಿಲ್ ಸಾಲ್ಟ್ 30 ಎಸೆತಗಳಲ್ಲಿ 46 ರನ್, ಹಾಗೂ ಕೊಹ್ಲಿ 18 ಎಸೆತಗಳಲ್ಲಿ 28 ರನ್ ಗಳಿಸಿದರು.
ಬೌಲಿಂಗ್ ನಲ್ಲಿ ಭುವನೇಶ್ವರ್ ಕುಮಾರ್ 3 ವಿಕೆಟ್ ಗಳಿಸಿದರೆ, ಜೇಕಬ್ ಡಫಿ, ಕೃನಾಲ್ ಪಾಂಡ್ಯ, ಅಭಿನಂದನ್ ಸಿಂಗ್ ತಲಾ 2 ವಿಕೆಟ್ ಪಡೆದರೆ, ಸುಯೇಶ್ ಶರ್ಮಾ ಒಂದು ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇನ್ನು ಈ ಗೆಲುವಿನೊಂದಿಗೆ ಆರ್ಸಿಬಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ.