ಮುಂಬೈ, ಏ. 14 (DaijiworldNews/AA): ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಉತ್ತಮ ಪ್ರದರ್ಶನ ನೀಡುತ್ತಿರುವ ವೈಭವ್ ಸೂರ್ಯವಂಶಿ ಕೇವಲ 15ನೇ ವಯಸ್ಸಿಗೆ ಟೀಂ ಇಂಡಿಯಾಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ.

ವೈಭವ್ ಸೂರ್ಯವಂಶಿ ಅವರು ಐರ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗುವ ನಿರೀಕ್ಷೆಯಿದೆ. ಆ ಮೂಲಕ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿಯಲು ಸಜ್ಜಾಗಿದ್ದಾರೆ.
ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಎರಡನೇ ಹಂತದ ತಂಡದಲ್ಲಿ ಸೇರಿಸಿಕೊಳ್ಳುವ ನಿರೀಕ್ಷೆಯಿದೆ. "ಸೂರ್ಯವಂಶಿ ಐರ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಂ ಇಂಡಿಯಾ ಪರ ಆಡಲಿದ್ದಾರೆ. ಆಯ್ಕೆದಾರರು ಇತರ ಅನೇಕ ಆಟಗಾರರ ಜೊತೆಗೆ ಸೂರ್ಯವಂಶಿ ಹೆಸರನ್ನು ಶಾರ್ಟ್ಲಿಸ್ಟ್ ಮಾಡಿದ್ದಾರೆ" ಎಂದು ಭಾರತೀಯ ಕ್ರಿಕೆಟ್ ಮಂಡಳಿಯ ಮೂಲವೊಂದರಿಂದ ತಿಳಿದುಬಂದಿದೆ.
ವೈಭವ್ ಅವರನ್ನು ಮುಂಬರುವ ಐರ್ಲೆಂಡ್ ವಿರುದ್ಧದ ಸರಣಿಗೆ ಹಾಗೂ ಈ ವರ್ಷದ ಕೊನೆಯಲ್ಲಿ ಜಿಂಬಾಬ್ವೆಯಲ್ಲಿ ನಡೆಯಲಿರುವ ಟಿ20 ಸರಣಿಗೂ ಆಯ್ಕೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.