ಅಹಮದಾಬಾದ್, ಮೇ. 31 (DaijiworldNews/AA): ಸತತ ಎರಡನೇ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಭಾನುವಾರ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು 6 ರನ್ಗಳಿಂದ ಸೋಲಿಸಿದೆ. ಈ ಮೂಲಕ ಐಪಿಎಲ್ 2026 ರ ಚಾಂಪಿಯನ್ ಪಟ್ಟವನ್ನು ಆರ್ಸಿಬಿ ಅಲಂಕರಿಸಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್ ಗಳಿಸುವಲ್ಲಿ ಶಕ್ತವಾಯಿತು.
ಈ ಗುರಿಯನ್ನು ಬೆನ್ನತ್ತಿದ ಆರ್ಸಿಬಿ ಕೇವಲ 18 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತು. ಈ ಮೂಲಕ ಆರ್ಸಿಬಿ ಮತ್ತೊಮ್ಮೆ ಚಾಂಪಿಯನ್ ಪಟ್ಟ ಗಳಿಸಿದೆ.