ಅಹಮದಾಬಾದ್, ಜೂ. 01 (DaijiworldNews/AA): ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ವಿರುದ್ಧ ಸೋತು ನಿರಾಸೆ ಅನುಭವಿಸಿದ ಗುಜರಾತ್ ಟೈಟಾನ್ಸ್ ತಂಡ ಪ್ರಯಾಣಿಸುತ್ತಿದ್ದ ಬಸ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಭಾರೀ ಬೆಂಕಿ ಕಾಣಿಸಿಕೊಂಡಿದೆ.

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂದ್ಯ ಮುಗಿಸಿ ಗುಜರಾತ್ ಟೈಟಾನ್ಸ್ ತಂಡ ಹೋಟೆಲ್ಗೆ ತೆರಳುತ್ತಿತ್ತು. ಈ ವೇಳೆ ಗುಜರಾತ್ ಟೈಟನ್ಸ್ ತಂಡ ಪ್ರಯಾಣಿಸುತ್ತಿದ್ದ ಬಸ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಇದರಿಂದ ಸುಮಾರು 1 ಗಂಟೆಗಳ ಕಾಲ ಆಟಗಾರರು ಬಸ್ನಲ್ಲೇ ಸಿಲುಕಿದ್ದಾರೆ. ಬಳಿಕ, ಆಟಗಾರರನ್ನ ಬೇರೆ ಬಸ್ಗೆ ಸ್ಥಳಾಂತರಿಸಲಾಯಿತು ಎಂದು ತಿಳಿದುಬಂದಿದೆ.