ಮುಂಬೈ, ಜು. 14 (DaijiworldNews/AK): ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗಿದೆ. ಉಭಯ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ನಲ್ಲಿ ನಡೆಯುತ್ತಿದೆ.

2027 ರ ಏಕದಿನ ವಿಶ್ವಕಪ್ಗೆ ಭಾರತದ ಸಿದ್ಧತೆಗೂ ಈ ಸರಣಿ ನಿರ್ಣಾಯಕವಾಗಿದೆ. ಈ ಸರಣಿಯೊಂದಿಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಜಸ್ಪ್ರೀತ್ ಬುಮ್ರಾ ಬಹಳ ದಿನಗಳ ನಂತರ ಒಟ್ಟಿಗೆ ಆಡುತ್ತಿದ್ದಾರೆ. ಹೀಗಾಗಿ ಈ ಮೂವರ ಪ್ರದರ್ಶನ ಹೇಗಿರಲಿದೆ ಎಂಬುದನ್ನು ಅಭಿಮಾನಿಗಳು ಕಾತುರರಾಗಿದ್ದಾರೆ.
ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡುತ್ತಿದೆ. ಇದರ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಇಂಗ್ಲೆಂಡ್ ತಂಡ ಒಂದು ದಿನ ಮೊದಲೇ ತನ್ನ ಆಡುವ ಹನ್ನೊಂದರ ಬಳಗವನ್ನು ಘೋಷಿಸಿತ್ತು. ಇದೀಗ ಟೀಂ ಇಂಡಿಯಾದ ಪ್ಲೇಯಿಂಗ್ ಕೂಡ ಹೊರಬಿದ್ದಿದೆ.
ಇಂಗ್ಲೆಂಡ್ ಪ್ಲೇಯಿಂಗ್ 11: ಜಾಕೋಬ್ ಬೆಥೆಲ್, ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಜೋಫ್ರಾ ಆರ್ಚರ್, ಲಿಯಾಮ್ ಡಾಸನ್, ಜೋಶ್ ಟಂಗ್, ಆದಿಲ್ ರಶೀದ್.
ಭಾರತದ ಪ್ಲೇಯಿಂಗ್ 11: ಶುಭ್ಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್.