ಚೆನ್ನೈ, ಆ. 31 (DaijiworldNews/AA): ಭಾರತೀಯ ಕ್ರಿಕೆಟ್ನ ಉದಯೋನ್ಮುಖ ಯುವ ಆಟಗಾರ ವೈಭವ್ ಸೂರ್ಯವಂಶಿ ದುಲೀಪ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಶತಕ ವಂಚಿತರಾಗಿದ್ದು, ಈ ಮೂಲಕ ವೈಭವ್ ಸೂರ್ಯವಂಶಿ ಹೆಸರಿಗೆ ಮತ್ತೊಂದು ದಾಖಲೆ ಸೇರಿದೆ.

ಸೆಂಟ್ರಲ್ ಝೋನ್ ವಿರುದ್ಧದ ಪಂದ್ಯದಲ್ಲಿ ಈಸ್ಟ್ ಝೋನ್ ಪರ ಕಣಕ್ಕಿಳಿದ ವೈಭವ್, ಕೇವಲ 81 ಎಸೆತಗಳಲ್ಲಿ 92 ರನ್ ಗಳಿಸಿ ಔಟಾಗಿದ್ದಾರೆ. ಈ ಮೂಲಕ ಕಳೆದ ಎರಡು ವರ್ಷಗಳಲ್ಲಿ 7 ಬಾರಿ 90 ಕ್ಕಿಂತ ಹೆಚ್ಚು ರನ್ಗಳಿಸಿ ಶತಕ ವಂಚಿತರಾಗಿದ್ದಾರೆ.
ದುಲೀಪ್ ಟ್ರೋಫಿ ಇತಿಹಾಸದಲ್ಲಿ ಅರ್ಧಶತಕ ಗಳಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ವೈಭವ್ ಸೂರ್ಯವಂಶಿ ಪಾತ್ರರಾಗಿದ್ದರು. ಆದರೆ ಶತಕ ಗಳಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಹೊಸ್ತಿಲಲ್ಲಿದ್ದರು. ಆದರೆ, ಶತಕ ಗಳಿಸಲು ಕೇವಲ 8 ರನ್ಗಳ ಅಂತರದಲ್ಲಿ ಔಟಾದರು.