ನವದೆಹಲಿ, ಅ.06 (DaijiworldNews/AA): ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ತಮ್ಮ ನಾಯಕತ್ವದ ಹುದ್ದೆಗೆ ಇಂದು ದಿಢೀರ್ ರಾಜೀನಾಮೆ ಘೋಷಿಸಿದ್ದಾರೆ.

ಈ ಕುರಿತು ಅ. 6 ರಂದು ಅಧಿಕೃತವಾಗಿ ಈ ನಿರ್ಧಾರ ಪ್ರಕಟಿಸಿರುವ ಅವರು, ನಾಯಕತ್ವದ ಜವಾಬ್ದಾರಿಯಿಂದ ಕೆಳಗಿಳಿಯುತ್ತಿರುವುದಾಗಿ ಹೇಳಿದ್ದಾರೆ. ಹರ್ಮನ್ಪ್ರೀತ್ ಅವರ ಈ ನಿರ್ಧಾರ ಕ್ರಿಕೆಟ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಇತ್ತೀಚೆಗಷ್ಟೇ ನಡೆದ ಏಷ್ಯನ್ ಗೇಮ್ಸ್ 2026ರಲ್ಲಿ ಹರ್ಮನ್ಪ್ರೀತ್ ಅವರ ನಾಯಕತ್ವದಲ್ಲಿ ಭಾರತ ಐತಿಹಾಸಿಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿತ್ತು. ಭಾರತೀಯ ಮಹಿಳಾ ಕ್ರಿಕೆಟ್ಗೆ ಐಸಿಸಿ ವಿಶ್ವಕಪ್ ಟ್ರೋಫಿ ಜೊತೆಗೆ ತಂಡಕ್ಕೆ ಹಲವು ಗೆಲುವುಗಳನ್ನು ಅವರು ತಂದುಕೊಟ್ಟಿದ್ದಾರೆ.
ಯಶಸ್ಸಿನ ಉತ್ತುಂಗದಲ್ಲಿದ್ದಾಗಲೇ ನಾಯಕತ್ವ ತ್ಯಜಿಸುವ ನಿರ್ಧಾರ ಕೈಗೊಂಡಿರುವುದು ಕ್ರಿಕೆಟ್ ವಲಯದಲ್ಲಿ ಅಚ್ಚರಿ ಮೂಡಿಸಿದೆ.
ಹರ್ಮನ್ಪ್ರೀತ್ ಅವರು ನಾಯಕತ್ವದಿಂದ ಕೆಳಗಿಳಿದಿದ್ದರೂ ಓರ್ವ ಹಿರಿಯ ಆಟಗಾರ್ತಿಯಾಗಿ ಮತ್ತು ಬ್ಯಾಟರ್ ಆಗಿ ಭಾರತ ತಂಡದಲ್ಲಿ ಮುಂದುವರಿಯಲಿದ್ದಾರೆ. ಇನ್ನು ಅವರ ರಾಜೀನಾಮೆ ಬೆನ್ನಲ್ಲೇ ಭಾರತ ಮಹಿಳಾ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.