ಮುಂಬೈ, ಅ.07 (DaijiworldNews/AA): ಪ್ರೇಮಾನಂದ ಮಹಾರಾಜ್ ಅವರ ಆಶ್ರಮಕ್ಕೆ ಭೇಟಿ ನೀಡಿದ್ದಕ್ಕಾಗಿ ವಿರಾಟ್ ಕೊಹ್ಲಿಗೆ ಬರೋಬ್ಬರಿ 5 ಕೋಟಿ ಹಣ ನೀಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೊಹ್ಲಿ ಅವರ ಅಧಿಕೃತ ವಕ್ತಾರರು ಸ್ಪಷ್ಟನೆ ನೀಡಿದ್ದಾರೆ.

ಶ್ರೀ ಕೃಷ್ಣ ಜನ್ಮಭೂಮಿ ಸಂಘರ್ಷ ನ್ಯಾಸ್ನ ಅಧ್ಯಕ್ಷ ದಿನೇಶ್ ಶರ್ಮಾ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಬರೆದ ಪತ್ರದಲ್ಲಿ, ರಾಜಸ್ಥಾನ ಮೂಲದ ಖಾಸಗಿ ಕಂಪನಿಯೊಂದು ವಿರಾಟ್ ಕೊಹ್ಲಿಯನ್ನು ಪ್ರೇಮಾನಂದ ಮಹಾರಾಜ್ ಅವರ ಆಶ್ರಮಕ್ಕೆ ಕರೆತರಲು 5 ಕೋಟಿ ರೂ. ಖರ್ಚು ಮಾಡಿದೆ ಎಂದು ಆರೋಪಿಸಿದ್ದಾರೆ.
"ಈ ಹೇಳಿಕೆ ಸಂಪೂರ್ಣ ಸುಳ್ಳು, ಆಧಾರರಹಿತ ಎಂದು ಹೇಳಿದ್ದಾರೆ. ವಿರಾಟ್ ಕೊಹ್ಲಿ ಅವರು ಪ್ರೇಮಾನಂದ ಮಹಾರಾಜ್ ಅವರ ಮೇಲಿರುವ ನಂಬಿಕೆ ಮತ್ತು ಗೌರವದಿಂದ ಆಶ್ರಮಕ್ಕೆ ಭೇಟಿ ನೀಡುತ್ತಿದ್ದಾರೆ. ಯಾವುದೇ ಹಣದ ವ್ಯವಹಾರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ರೀತಿಯ ವಿಷಯಗಳನ್ನು ಹರಡುವ ಮೊದಲು ಪರಿಸೀಲನೆ ಮಾಡಬೇಕು" ಎಂದು ಕೊಹ್ಲಿ ಅವರ ಅಧಿಕೃತ ವಕ್ತಾರರು ಸ್ಪಷ್ಟನೆ ನೀಡಿದ್ದಾರೆ.