ದೆಹಲಿ, ಅ.12 (DaijiworldNews/AA): ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಭಾರತ ತಂಡದ ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ೨೦ ಪಂದ್ಯವು ಇಂದೋರ್ ನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಭಾರತದ ಪರ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ 30 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್ ಹಾಗೂ 6 ಫೋರ್ಗಳೊಂದಿಗೆ 69 ರನ್ ಗಳಿಸಿದರು.
ಈ 69 ರನ್ಗಳೊಂದಿಗೆ ಅಭಿಷೇಕ್ ಟಿ20 ಕ್ರಿಕೆಟ್ನಲ್ಲಿ 2000 ರನ್ ಪೂರೈಸಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ 2000 ರನ್ ಪೂರೈಸಿದ ಹೊಸ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ ಈ ದಾಖಲೆ ಭಾರತ ತಂಡದ ಮಾಜಿ ನಾಯಕ ಸೂರ್ಯಕುಮಾರ್ ಯಾದವ್ ಹೆಸರಿನಲ್ಲಿತ್ತು. ಅವರು ಕೇವಲ 1,164 ಎಸೆತಗಳಲ್ಲಿ 2000 ರನ್ ಪೂರೈಸಿದ್ದರು.
ಇದೀಗ ಸೂರ್ಯಕುಮಾರ್ ಯಾದವ್ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಅಭಿಷೇಕ್ ಶರ್ಮಾ ಮುರಿದಿದ್ದಾರೆ. ಅಭಿಷೇಕ್ ಶರ್ಮಾ ಕೇವಲ 1,024 ಎಸೆತಗಳಲ್ಲಿ 2000 ರನ್ ಕಲೆಹಾಕುವ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ವೇಗವಾಗಿ 2000 ರನ್ಗಳಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.