ದೆಹಲಿ, ನ.27 (DaijiworldNews/AA): ಭಾರತದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಟೆಸ್ಟ್ ಕ್ರಿಕೆಟ್ನಲ್ಲಿ ಅಪರೂಪದ ಸಾಧನೆಯೊಂದನ್ನು ಮಾಡುವ ಮೂಲಕ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ಕ್ರೈಸ್ಟ್ಚರ್ಚ್ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದ ಆಡುವ 11 ಬಳಗದಲ್ಲಿ ಸ್ಥಾನ ಪಡೆದಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ಬಳಿಕ ಅತಿ ಹೆಚ್ಚು ವಿಭಿನ್ನ ಮೈದಾನಗಳಲ್ಲಿ ಟೆಸ್ಟ್ ಪಂದ್ಯಗಳನ್ನಾಡಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಜೈಸ್ವಾಲ್ ಅಗ್ರಸ್ಥಾನಕ್ಕೇರಿದ್ದಾರೆ. ಇದರೊಂದಿಗೆ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.
ಕ್ರೈಸ್ಟ್ಚರ್ಚ್ನ ಹ್ಯಾಗ್ಲಿ ಓವಲ್ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ನಲ್ಲಿ ಸ್ಥಾನ ಪಡೆದಿರುವ ಜೈಸ್ವಾಲ್ ಅವರು 33 ವಿಭಿನ್ನ ಮೈದಾನಗಳಲ್ಲಿ ಆಡಿದ ಹೆಗ್ಗಳಿಕೆ ಅವರದ್ದಾಗಲಿದೆ. ಇದಕ್ಕೂ ಮುನ್ನ ಈ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಲ್ಲಿತ್ತು. ಅವರು 32 ವಿಭಿನ್ನ ಮೈದಾನಗಳಲ್ಲಿ ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಇದೀಗ 33 ಪಂದ್ಯಗಳೊಂದಿಗೆ ಜೈಸ್ವಾಲ್ ಸಚಿನ್ ಅವರನ್ನು ಹಿಂದಿಕ್ಕಿದ್ದಾರೆ. ಇನ್ನು ಇದೇ ಪಟ್ಟಿಯಲ್ಲಿ ಸಂಜಯ್ ಮಂಜ್ರೇಕರ್ ಕೂಡ ಇದ್ದು, ಅವರು ೩೩ ಮೈದಾನಗಳಲ್ಲಿ ಆಡಿದ್ದಾರೆ.