ಹೈದರಾಬಾದ್, ನ.27(DaijiworldNews/AA): ಸೌತ್ನ ಸ್ಟಾರ್ ನಟಿ ಕೀರ್ತಿ ಸುರೇಶ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಭಾವಿ ಪತಿಯೊಂದಿಗಿನ ಫೋಟೋ ಹಂಚಿಕೊಂಡಿದ್ದು, ಅವರ ಮದುವೆಯ ಬಗ್ಗೆ ಫ್ಯಾನ್ಸ್ ಗೆ ಗುಡ್ ನ್ಯೂಸ್ ನೀಡಿದ್ದಾರೆ.
ಕಳೆದ ಕೆಲ ದಿನಗಳಿಂದ ನಟಿ ಕೀರ್ತಿ ಸುರೇಶ್ ಹಾಗೂ ಉದ್ಯಮಿ ಆಂಟೋನಿ ಅವರ ಮದುವೆ ಸುದ್ದಿ ಹರಿದಾಡುತ್ತಿತ್ತು. ಆದರೆ ಇದ್ಯಾವುದಕ್ಕೂ ನಟಿ ಪ್ರತಿಕ್ರಿಯಿಸಿರಲಿಲ್ಲ. ಇದೀಗ ನಟಿ 15 ವರ್ಷಗಳ ಬಂಧ ಎಂದು ಕ್ಯಾಪ್ಷನ್ ನೀಡಿ ಭಾವಿ ಪತಿ ಆಂಟೋನಿ ಜೊತೆಗಿನ ಫೋಟೋ ಶೇರ್ ಮಾಡಿದ್ದಾರೆ.
15 ವರ್ಷಗಳಿಂದ ಕೀರ್ತಿ ಸುರೇಶ್ ಹಾಗೂ ಆಂಟೋನಿ ಅವರು ಪರಸ್ಪರ ಪ್ರೀತಿಸುತ್ತಿದ್ದು, ಇದೀಗ ಡಿಸೆಂಬರ್ 11 ರಂದು ಮದುವೆಯಾಗಲು ನಿರ್ಧರಿಸಿದ್ದಾರೆ. ಕೀರ್ತಿ ಹಾಗೂ ಆಂಟೋನಿ ಗೋವಾದಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ಗೆ ಪ್ಲ್ಯಾನ್ ಮಾಡಿದ್ದಾರೆ. ಈ ಮದುವೆಗೆ ಸಿನಿಮಾ ಸ್ಟಾರ್ಸ್ ಮತ್ತು ರಾಜಕೀಯದ ಗಣ್ಯರಿಗೆ ಆಹ್ವಾನ ನೀಡಲಿದ್ದಾರೆ ಎಂದು ಹೇಳಲಾಗಿದೆ.