ಹಾವೇರಿ, ನ.29(DaijiworldNews/AA): ಸಿಎಂ ಆಗಲಿಕ್ಕೆ ಆಸೆ ಇದೆ, ಅಧ್ಯಕ್ಷ ಆಗಲಿಕ್ಕೆ ಆಸೆ ಇದೆ, ಮಂತ್ರಿ ಆಗಲಿಕ್ಕೂ ಆಸೆ ಇದೆ. ಆದ್ರೆ ಅಂತಿಮವಾಗಿ ಪಕ್ಷ ತೀರ್ಮಾನ ಮಾಡಲಿ ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಸಿಎಂ ಆಗ್ತಾರೆ ಅಂತ ಹೇಳಿ ಹೆಸರು ಓಡಾಡ್ತು. ಈಗ ಅಧ್ಯಕ್ಷ ಆಗ್ತಾರೆ ಅಂತಾ ಹೆಸರು ಓಡಾಡ್ತಾ ಇದೆ. ನಮ್ಮ ಉತ್ಸಾಹ ಅಷ್ಟೆ. ಅಂತಿಮವಾಗಿ ಪಕ್ಷ ತೀರ್ಮಾನ ಮಾಡಬೇಕು. ನಾವೆಲ್ಲಾ ಕಾದು ನೋಡಬೇಕು ಅಷ್ಟೆ. ಈ ವಿಚಾರವಾಗಿ ನಾನು ಯಾವುದೇ ರೀತಿ ಒತ್ತಡ ಹಾಕಿಲ್ಲ. ಚುನಾವಣೆಯಲ್ಲಿ ಗೆಲ್ಲಿಸಿದ್ದೀವಿ, ತೃಪ್ತಿ ಇದೆ. ಮಂತ್ರಿಯಾಗಿ ಕೆಲಸ ಮಾಡ್ತಾ ಇದ್ದೀವಿ, ತೃಪ್ತಿ ಇದೆ ಎಂದರು.
ಕಾಂಗ್ರೆಸ್ ಸಮಾವೇಶ ಡಿಸೆಂಬರ್ 5 ಅಥವಾ 8 ಎಂಬುದು ಖಚಿತ ಆಗಿಲ್ಲ. ಹೇಳ್ತಾ ಇದಾರೆ. ಎಲ್ಲಿದೆ ಪತ್ರ? ಯಾರಿಗೆ ಬರೆದರು? ಯಾಕೆ ಬರೆದರು? ಏನು ಆ್ಯಕ್ಷನ್ ತಗೊಂಡ್ರು? ಬೇಕಲ್ಲಾ? ಸುಮ್ಮನೇ ಏನೋ ಒಂದು ವಾಟ್ಸಾಪ್ನಲ್ಲಿ ಬಂದರೆ ಇಡೀ ಪಕ್ಷದ ನಿರ್ಧಾರ ಆಗಲ್ಲ. ಸಮಾವೇಶದ ಬಗ್ಗೆ ಅಧ್ಯಕ್ಷರು ಇದಾರೆ, ಸಿಎಂ ಇದಾರೆ ಅವರು ತೀರ್ಮಾನ ಮಾಡ್ತಾರೆ. ಬಣ ಬಡಿದಾಟ ಇದೆ ಅಂತಾ ನಾನು ಹೇಳ್ತಾ ಇರೋದು 10ನೇ ಸಲ. ನಮ್ಮ ಪಕ್ಷದಲ್ಲೂ ಇದೆ, ಬೇರೆ ಪಕ್ಷದಲ್ಲೂ ಬಣ ಬಡಿದಾಟ ಇದೆ. ಬಡಿದಾಟ ಇರೋದೇ ಇದು. ಆದರೆ ಚುನಾವಣೆ ಬಂದಾಗ ಒಂದಾಗ್ತೀವಿ ಎಂದು ಹೇಳಿದರು.