ನವದೆಹಲಿ, ನ.29(DaijiworldNews/AK):ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು ಕಾಂಗ್ರೆಸ್ ಪಕ್ಷವು ಇಂದು ಪ್ರಕಟಿಸಿದೆ.
ಆಮ್ ಆದ್ಮಿ ಪಾರ್ಟಿ ಯೊಂದಿಗೆ ಯಾವುದೇ ಮೈತ್ರಿಯನ್ನು ಮಾಡಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಘೋಷಿಸಿದೆ. ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 70 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷವು ಸ್ವಂತವಾಗಿ ಸ್ಪರ್ಧಿಸಲಿದೆ ಎಂದು ದೆಹಲಿ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರ ಯಾದವ್ ಹೇಳಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆಗೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ನಾಯಕರು ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಅಭ್ಯರ್ಥಿಯನ್ನು ಚುನಾವಣೆಯ ನಂತರ ಕಾಂಗ್ರೆಸ್ ಶಾಸಕಾಂಗ ಪಕ್ಷವು ನಿರ್ಧರಿಸುತ್ತದೆ ಎಂದು ದೇವೇಂದ್ರ ಯಾದವ್ ಹೇಳಿದ್ದಾರೆ.