ಬೆಂಗಳೂರು, ಜ 17 (DaijiworldNews/HR): ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಅಂತ್ಯ ಅಥವಾ ಮುಂದುವರಿಕೆ ಬಗ್ಗೆ ಶುಕ್ರವಾರ ಮತ್ತೆ ಸಭೆ ಕರೆಯಲಾಗುತ್ತಿದ್ದು, ಆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಶುಕ್ರವಾರದವರೆಗೆ ರಾಜ್ಯದಲ್ಲಿ ವೀಕೆಂಡ್ ಹಾಗೂ ನೈಟ್ ಕರ್ಪ್ಯೂ ಮುಂದುವರೆಯಲಿದ್ದು, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ಇಂದು ನಡೆದ ಸಭೆಯಲ್ಲಿ ತಜ್ಞರು ಸೇರಿದಂತೆ ಅನೇಕ ಅಧಿಕಾರಿಗಳು ಎಲ್ಲಾ ಭಾಗವಹಿಸಿದ್ದು, ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಕೋವಿಡ್ ಪರೀಕ್ಷೆಯನ್ನು ಕೂಡ ಹೆಚ್ಚಿನದಾಗಿ ಮಾಡಲಾಗುತ್ತಿದೆ. ಅಷ್ಟು ಪರೀಕ್ಷೆ ಮಾಡುವ ಅವಶ್ಯಕತೆ ಇಲ್ಲ ಎಂದು ತಜ್ಞರು ತಿಳಿಸಿದ್ದಾರೆ.
ಲಸಿಕಾಕರಣವು ಐದಾರು ಜಿಲ್ಲೆಗಳಲ್ಲಿ ಕಡಿಮೆ ಆಗಿದ್ದು, ಆ ಜಿಲ್ಲೆಗಳ ಡಿಸಿಗಳ ಜೊತೆಗೆ ಲಸಿಕಾಕರಣ ಹೆಚ್ಚು ಮಾಡೋದಕ್ಕೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.