ನವದೆಹಲಿ, ಜ 21 (DaijiworldNews/HR): ಮಹಾತ್ಮ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ಅವರನ್ನು ಮಹಾರಾಷ್ಟ್ರದ ಥಾಣೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ತಿಳಿದು ಬಂದಿದೆ.

ಕಾಳಿಚರಣ್ ಮಹಾರಾಜ್ ಅವರನ್ನು ಥಾಣೆ ನಗರದ ನೌಪಾದಾ ಪೊಲೀಸ್ ಠಾಣೆಯ ತಂಡವು ಬುಧವಾರ ರಾತ್ರಿ ಛತ್ತೀಸ್ಗಢದ ರಾಜಧಾನಿ ರಾಯ್ಪುರದಿಂದ ಬಂಧಿಸಿದ್ದು, ಇದೇ ಪ್ರಕರಣದಲ್ಲಿ ಜೈಲಿನಲ್ಲಿದ್ದ ಎಸ್ ವಿ ಮೆಟಿಲ್ ಪಾಟೀಲ್ ಅವರನ್ನು ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.
ಇನ್ನು ನ್ಯಾಯಾಲಯದ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಅವರ ಹೇಳಿಕೆಗಳಿಗೆ ಸಂಬಂಧಿಸಿದಂತೆ ಎನ್ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಸಚಿವ ಜಿತೇಂದ್ರ ಅವ್ಹಾದ್ ಅವರು ನೀಡಿದ ದೂರಿನ ಆಧಾರದ ಮೇಲೆ ಕಾಳಿಚರಣ್ ಮಹಾರಾಜ್ ವಿರುದ್ಧ ಪ್ರಕರಣ ದಾಖಲಿಸಿದ ನಂತರ ನೌಪಾದ ಪೊಲೀಸರು ಅವರನ್ನು ಬಂಧಿಸಿದ್ದಾರೆ.