ಭುವನೇಶ್ವರ, ನ 24 (DaijiworldNews/HR): ಪಟಾಕಿ ಸಿಡಿಸುವ ಸ್ಪರ್ಧೆ ನಡೆಯುತ್ತಿದ್ದ ವೇಳೆ ಸ್ಫೋಟ ಸಂಭವಿಸಿ, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೇಂದ್ರಪಾರದ ಸದರ್ ಪಿಎಸ್ ವ್ಯಾಪ್ತಿಯ ಬಲಿಯಾ ಬಜಾರ್ನಲ್ಲಿ ನಡೆದಿದೆ.

ಭುವನೇಶ್ವರದಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಬಲಿಯಾ ಬಜಾರ್ನಲ್ಲಿರುವ ನಿಮಜ್ಜನ ಸ್ಥಳದಲ್ಲಿ ವಿವಿಧ ಪೂಜಾ ಪಂಡಲ್ಗಳ ನಡುವೆ ಪಟಾಕಿ ಸಿಡಿಸುವ ಸ್ಪರ್ಧೆ ಇತ್ತು ಏರ್ಪಡಿಸಲಾಗಿದ್ದು, ಈ ವೇಳೆ ಶೇಖರಿಸಿಟ್ಟಿದ್ದ ಪಟಾಕಿಗಳ ರಾಶಿಯ ಮೇಲೆ ಪಟಾಕಿಯ ಕಿಡಿ ಬಿದ್ದು ಜನರು ಗಾಯಗೊಂಡಿದ್ದಾರೆ.
ಇನ್ನು ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಕಟಕ್ನ ಎಸ್ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.