ಬೆಂಗಳೂರು, ಫೆ 02 (DaijiworldNews/HR): ನಟಿ ಅನುಷ್ಕಾ ಶೆಟ್ಟಿ ಅವರ ಡೀಪ್ಫೇಕ್ ಫೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ಸಂಬಂಧಿಸಿ ಅವರ ಪೋಷಕರು ದೂರು ಹಾಕಿದ್ದಾರೆ.
![](https://daijiworld.ap-south-1.linodeobjects.com/Linode/img_tv247/hr-020224-film.jpg)
ಇತ್ತೀಚಿನ ದಿನಗಳಲ್ಲಿ ನಾಯಕಿಯರ ಡೀಪ್ಫೇಕ್ ವಿಡಿಯೋಗಳು ವೈರಲ್ ಆಗುತ್ತಿದ್ದು, ಆ್ಯಪ್ಗಳ ಸಹಾಯದಿಂದ ಕೆಲವರು ಅಶ್ಲೀಲ ಫೋಟೋಗಳು ಮತ್ತು ವೀಡಿಯೊಗಳನ್ನು ರೆಡಿ ಮಾಡಿ ವೈರಲ್ ಮಾಡುತ್ತಿದ್ದಾರೆ.
ಇನ್ನು ರಶ್ಮಿಕಾ ಮಂದಣ್ಣ ಅವರ ಡೀಪ್ಫೇಕ್ ವೀಡಿಯೋ ವೈರಲ್ ಆಗುತ್ತಿದ್ದಂತೆ ಹಲವರು ಇದಕ್ಕೆ ಪ್ರತಿಕ್ರಿಯಿಸಿದ್ದರು. ಇಂತಹ ಅಶ್ಲೀಲ ವಿಡಿಯೋಗಳನ್ನು ಸೃಷ್ಟಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿತ್ತು. ನಂತರ ತಪ್ಪಿತಸ್ಥನನ್ನು ಬಂಧಿಸಲಾಗಿತ್ತು.
ಇದೀಗ ಅನುಷ್ಕಾ ಶೆಟ್ಟಿಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅನುಷ್ಕಾ ಹಾಗೂ ಪ್ರಭಾಸ್ ಮದುವೆಯಾಗಿ ಅವರಿಗೆ ಮಕ್ಕಳು ಇರುವಂಥ ಫೋಟೋಗಳನ್ನು ಸೃಷ್ಟಿ ಮಾಡಲಾಗಿದೆ.