ಬೆಂಗಳೂರು, ಫೆ 24(DaijiworldNews/MS): ಕರ್ನಾಟಕದ ಉದಯೋನ್ಮುಖ ಕ್ರಿಕೆಟ್ ಆಟಗಾರ ಪಂದ್ಯದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
![](https://daijiworld.ap-south-1.linodeobjects.com/Linode/img_tv247/ms-240224-spots_.jpg)
ಕರ್ನಾಟಕ ತಂಡದ ಆಟಗಾರ ಕೆ. ಹೊಯ್ಸಳ(34) ಮೃತ ಆಟಗಾರ ಆರ್.ಎಸ್.ಎ. ಕ್ರೀಡಾಂಗಣದಲ್ಲಿ ಆಡಿಟ್ ಮತ್ತು ಅಕೌಂಟ್ ಇಲಾಖೆಯ ದಕ್ಷಿಣ ವಲಯ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಹೊಯ್ಸಳ ಪ್ರತಿನಿಧಿಸುತ್ತಿದ್ದರು.
ಪಂದ್ಯದಲ್ಲಿ ತಮಿಳುನಾಡು ತಂಡವನ್ನು ಮಣಿಸುವಲ್ಲಿ ಕರ್ನಾಟಕ ಯಶಸ್ವಿಯಾಗಿತ್ತು. ಈ ವೇಳೆ ತಂಡದೊಂದಿಗೆ ಸಂಭ್ರಮಾಚರಣೆ ಮಾಡಿದ್ದ ಹೊಯ್ಸಳಗೆ ಮೈದಾನದಲ್ಲೇ ಎದೆಯಲ್ಲಿ ನೋವು ಕಾಣಿಸಿಕೊಂಡು ಪ್ರಜ್ಞೆ ತಪ್ಪಿದ್ದಾರೆ. ಬಳಿಕ ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ತಲುಪುವಷ್ಟರಲೇ ಹೊಯ್ಸಳ ಅವರು ಮೃತಪಟ್ಟಿದ್ದಾರೆ.
ಮಧ್ಯಮ ಕ್ರಮಾಂಕದ ವೇಗಿಯಾಗಿರುವ ಹೊಯ್ಸಳ ಅಂಡರ್ -15 ವಿಭಾಗದಲ್ಲಿ ಕರ್ನಾಟಕ ತಂಡ ಪ್ರತಿನಿಧಿಸಿದ್ದರು.