ಪುತ್ತೂರು, ಏ 02(DaijiworldNews/AA): ಬೆಂಕಿಯ ಕೆನ್ನಾಲೆಗೆ ಕೋಟ್ಯಾಂತರ ಮೌಲ್ಯದ ಸೊತ್ತುಗಳು ಸುಟ್ಟು ನಾಶವಾದ ಘಟನೆ ಪುತ್ತೂರಿನ ದರ್ಬೆ ಬಳಿ ಇರುವ ಎಲೆಕ್ಟ್ರಾನಿಕ್ಸ್ ಶೋರೂಂ ಒಂದರ ಗೋದಾಮಿನಲ್ಲಿ ಇಂದು ನಸುಕಿನ ಜಾವ ನಡೆದಿದೆ.
![](https://daijiworld.ap-south-1.linodeobjects.com/Linode/img_tv247/AA-020424-fire.jpg)
ಏಕಾಏಕಿ ಬೆಂಕಿ ಅವಘಡ ಸಂಭವಿಸಿದ್ದು, ಗೋದಾಮಿನಲ್ಲಿರುವ ಸೊತ್ತುಗಳು ಧಗಧಗನೆ ಹೊತ್ತಿ ಉರಿದಿವೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದು, ಅವರಿಗೆ ಪುತ್ತೂರು ನಗರ ಠಾಣಾ ಪೊಲೀಸರು ಸಾಥ್ ನೀಡಿದ್ದಾರೆ.