ಶಿರ್ವ, ಮೇ.15(DaijiworldNews/AA): ಇಲ್ಲಿನ ಪೈಜಲ್ ಇಸ್ಲಾಂ ಎಜುಕೇಶನ್ ಟ್ರಸ್ಟ್ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ಮಂಗಳವಾರ ನಾಪತ್ತೆಯಾಗಿದ್ದಾರೆ.
![](https://daijiworld.ap-south-1.linodeobjects.com/Linode/img_tv247/denzil_100923_shirvaps.jpg)
ತಬಾರಕ್, ಜಮ್ ಶೇಡ್, ತಂಜೀರ್ ಆಲ್ಮ್, ಶಾಹಿಲ್ ನಾಪತ್ತೆಯಾದ ವಿದ್ಯಾರ್ಥಿಗಳು.
ನಾಲ್ವರು ವಿದ್ಯಾರ್ಥಿಗಳು ನಾಪತ್ತೆಯಾದ ಕುರಿತು ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಪರ್ವೇಜ್ ಸಲೀಂ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಮೂಲತಃ ಬಿಹಾರ ರಾಜ್ಯದವರಾದ ಈ ವಿದ್ಯಾರ್ಥಿಗಳು ಪೈಜಲ್ ಇಸ್ಲಾಂ ಎಜುಕೇಶನ್ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಮಂಗಳವಾರ ಮಧ್ಯಾಹ್ನದ ಅವಧಿಯಲ್ಲಿ ಸಂಸ್ಥೆಯಿಂದ ಹೊರಗಡೆ ಹೋದವರು ವಾಪಾಸ್ಸು ಬಾರದೆ ಕಾಣೆಯಾಗಿದ್ದಾರೆ ಎನ್ನಲಾಗಿದೆ.